ಶುಕ್ರವಾರ, ಮೇ 27, 2022
23 °C

ಆಟಿಕೆ ಚೆಂಡಿನೊಳಗೆ ಚಿನ್ನದ ಗಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಟಿಕೆ ಚೆಂಡಿನೊಳಗೆ ಬಚ್ಚಿಟ್ಟಿದ್ದ ಚಿನ್ನದ ಗಟ್ಟಿಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ದುಬೈನಿಂದ ಬೆಂಗಳೂರಿಗೆ ಮಂಗಳವಾರ ರಾತ್ರಿ ಬಂದಿದ್ದ ಇಂಡಿಗೊ ವಿಮಾನದಲ್ಲಿ ಆಟಿಕೆ ಚೆಂಡು ಪತ್ತೆಯಾಗಿತ್ತು. ಅದು ಯಾರಿಗೆ ಸೇರಿದ್ದು ಎಂಬುದು ಗೊತ್ತಿರಲಿಲ್ಲ. ಚೆಂಡು ಬಿಚ್ಚಿ ನೋಡಿದಾಗ, ಅದರಲ್ಲೇ ₹ 11.30 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಇತ್ತು’ ಎಂದು ಮೂಲಗಳು ಹೇಳಿವೆ.

‘ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರು, ಭದ್ರತೆಗೆ ಹೆದರಿ ವಿಮಾನದಲ್ಲೇ ಚೆಂಡು ಬಿಟ್ಟು ಹೋಗಿರುವ ಸಾಧ್ಯತೆ ಇದೆ. ಪ್ರಯಾಣಿಕರ ಪಟ್ಟಿ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು