ಭಾನುವಾರ, ಸೆಪ್ಟೆಂಬರ್ 19, 2021
30 °C

ಮಂಗಳೂರು ವಿಮಾನ ನಿಲ್ದಾಣ ‘ಅದಾನಿ’ ನಿರ್ವಹಣೆ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಅದಾನಿ ಎಂಟರ್ ಪ್ರೈಸಸ್‌ಗೆ ಹಸ್ತಾಂತರ ನಿರ್ಣಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಪ್ರಕಟಿಸಿತು.

ಕೇರಳದ ತಿರುವನಂತಪುರ ವಿಮಾನ ನಿಲ್ದಾಣ ನಿರ್ವಹಣೆ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲಾಗಿದೆ. ಆ ನಿರ್ಣಯವನ್ನು ಅಲ್ಲಿನ ಹೈಕೋರ್ಟ್‌ ಎತ್ತಿ ಹಿಡಿದಿದೆ. ಕೇಂದ್ರದ ನಿರ್ಧಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.

ಮಂಗಳೂರು ವಿಮಾನ ನಿಲ್ದಾಣ ಕಾರ್ಯಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೇಂದ್ರ ಸಚಿವ ಸಂಪುಟ 2018ರಲ್ಲಿ ನಿರ್ಣಯ ಕೈಗೊಂಡಿತ್ತು. ಅದನ್ನು ಆಧರಿಸಿ ಬಿಡ್ಡಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಅದಾನಿ ಎಂಟರ್‌ ಪ್ರೈಸಸ್ ನಿರ್ವಹಣೆ ಗುತ್ತಿಗೆ ಪಡೆದುಕೊಂಡಿದೆ.

ಇದರಿಂದ ಬರುವ ಆದಾಯ ಎಷ್ಟು ಎಂಬುದನ್ನು ಹೇಳಿಲ್ಲ. ಏಕ ಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಣಯ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

‘ಇದು ಕೇಂದ್ರ ಸರ್ಕಾರದ ನೀತಿ–ನಿರೂಪಣೆಗೆ ಸಂಬಂಧಿಸಿದ ವಿಷಯ. ಎಲ್ಲಾ ರೀತಿಯ ವಿಚಾರಗಳನ್ನು ಪರಿಶೀಲಿಸಿಯೇ ನಿರ್ಣಯ ಕೈಗೊಳ್ಳಲಾಗಿದೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು