ಗುರುವಾರ , ಜುಲೈ 7, 2022
21 °C

ವಿಜಯಶಂಕರ್‌ಗೆ ‘ಅಕಲಂಕ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ದಿ. ಡಾ.ಉಪ್ಪಂಗಳ ರಾಮಭಟ್ಟ ಅವರ ಹೆಸರಿನ ದತ್ತಿ ನಿಧಿಯಿಂದ ಕೊಡಮಾಡುವ ‘ಅಕಲಂಕ’ ಪ್ರಶಸ್ತಿಗೆ ವಿಮರ್ಶಕರು ಹಾಗೂ ಅಂಕಣಕಾರರಾದ ಎಸ್.ಆರ್. ವಿಜಯಶಂಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.

ಪ್ರಶಸ್ತಿಯು ಫಲಕ ಹಾಗೂ ₹10,000 ಗೌರವಧನ ಒಳಗೊಂಡಿದ್ದು ಮೇ ತಿಂಗಳಲ್ಲಿ ಉಡುಪಿಯಲ್ಲಿ
ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನರೆಂದ್ರ ಕುಮಾರ್ ಕೋಟ ತಿಳಿಸಿದ್ದಾರೆ.

ಎಸ್‌.ಆರ್‌. ವಿಜಯಶಂಕರ್‌ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾಂ ತರ ಕೇಂದ್ರದ ಗೌರವ ನಿರ್ದೇಶಕರಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.