ಶನಿವಾರ, ಸೆಪ್ಟೆಂಬರ್ 18, 2021
28 °C

ಆಲಮಟ್ಟಿ: 1.8 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಲಮಟ್ಟಿ ಜಲಾಶಯದಿಂದ 1.80 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಶುಕ್ರವಾರ ಜಲಾಶಯ ಸೀತಮ್ಮನಗಿರಿ ಭಾಗದಿಂದ ಕಾಣುತ್ತಿರುವುದು ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ

ಆಲಮಟ್ಟಿ (ವಿಜಯಪುರ): ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಕರ್ನಾಟಕದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶುಕ್ರವಾರ 1,50,000 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಜಲಾಶಯದ ಎಲ್ಲ 26 ಗೇಟ್‌ಗಳು ಹಾಗೂ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ಸೇರಿದಂತೆ ಒಟ್ಟಾರೆ 1,80,000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ. ಪ್ರವಾಹ ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂಜಾಗ್ರತೆಯಾಗಿ ಹೊರಹರಿವು ಹೆಚ್ಚಿಸಲಾಗಿದ್ದು, 519.60 ಮೀ ಗರಿಷ್ಠ ಎತ್ತರದ ಜಲಾಶಯದಲ್ಲಿ 517.95 ಮೀ.ವರೆಗೆ ನೀರು ಸಂಗ್ರಹವಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಗೇಟ್‌ ತೆರೆದು ನೀರನ್ನು ಬಿಡಲಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು