ತಾ.ಪಂ, ಜಿ.ಪಂ ಮೀಸಲಾತಿ ಕುರಿತು ಚರ್ಚಿಸಲು 31ಕ್ಕೆ ಸರ್ವಪಕ್ಷ ಸಭೆ

ಬೆಂಗಳೂರು: ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಇದೇ 31ರಂದು ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನಸಭೆಯಲ್ಲಿ ಸೋಮವಾರ ಇಲಾಖಾ ಬೇಡಿಕೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ‘ಮೂರು ಹಂತದ ಪರಿಶೀಲನೆ ಬಳಿಕವೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ವಿಚಾರದಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಲು ಸರ್ಕಾರ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಮೀಸಲಾತಿ ಗೊಂದಲದ ಬಗ್ಗೆ ಕಾನೂನು ಸಚಿವರು, ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಜತೆಗೆ ನಾಲ್ಕು ಸಲ ಸಭೆ ನಡೆಸಲಾಗಿದೆ’ ಎಂದೂ ಅವರು ಹೇಳಿದರು.
‘ನರೇಗಾ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 53 ಕೋಟಿ ಮಾನವ ದಿನದ ಕೆಲಸ ಮಾಡಲಾಗಿದೆ. ಈ ವರ್ಷ 13 ಕೋಟಿ ಮಾನವ ದಿನದ ಗುರಿ ಮೀರಿ ಮತ್ತೆ 3 ಕೋಟಿ ಮಾನವ ದಿನದ ಕೆಲಸ ಮಾಡಲಾಗಿದೆ. ನರೇಗಾ ಕಾರ್ಮಿಕರಿಗೆ ಯಾವುದೇ ಕೂಲಿ ಬಾಕಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.