ಬೆಂಗಳೂರು: ಹಿಜಾಬ್ಗೆ ಸಂಬಂಧಿಸಿದ ಹೈಕೋರ್ಟ್ನ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ ಹಿಜಾಬ್ಗೆ ವಿಧಿಸಿದ ನಿರ್ಬಂಧ ಪ್ರಶ್ನಿಸಿ ಮುಸ್ಲಿಮ್ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮನವಿಗಳನ್ನು ರಾಜ್ಯ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತು. ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ನ್ಯಾಯಾಲಯ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿತು.

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ ತೀರ್ಪು ಸ್ವಾಗತಾರ್ಹ. ಕಾನೂನು ಸುವ್ಯವಸ್ಥೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಇಲ್ಲವಾದರೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.