ಶನಿವಾರ, ಮೇ 28, 2022
31 °C
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ

ವಾಲ್ಮೀಕಿ ಸ್ವಾಮೀಜಿ ವಿರುದ್ಧದ ಆರೋಪ ನಿರಾಧಾರ: ಎಸ್.ವಿ.ರಾಮಚಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ‘ವಾಲ್ಮೀಕಿ ಜಾತ್ರೆಯ ಲೆಕ್ಕಪತ್ರ ಸಂಬಂಧ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರ ಬಗ್ಗೆ ಮಾಡುತ್ತಿರುವ ಆರೋಪಗಳು ನಿರಾಧಾರ’ ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲವನ್ನೂ ಪರಿಶೀಲಿಸಿಯೇ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ವಾಲ್ಮೀಕಿ ಪೀಠಾಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರ ಬಗ್ಗೆ ಕೇಳಿಬರುತ್ತಿರುವ ಆರೋಪ ಸತ್ಯಕ್ಕೆ ದೂರ. ವಾಲ್ಮೀಕಿ ಜಾತ್ರೆ ಯಶಸ್ವಿಯಾಗಿ ನಡೆಯುತ್ತದೆ. ಎಲ್ಲಿಯೂ ಗೊಂದಲವಿಲ್ಲ. ನಮ್ಮವರೇ ಕೆಲವರು ಮಾಡುತ್ತಿರುವ ಆರೋಪಗಳಿಗೆ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದರು.

‘ಬಸವರಾಜ ಬೊಮ್ಮಾಯಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. ಯಡಿಯೂರಪ್ಪ ಅವರ ಜೊತೆ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು