ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್ಪಿ ಜತೆ ಹೊಂದಾಣಿಕೆ ಮಾಡಿ ತಪ್ಪು: ಕುಮಾರಸ್ವಾಮಿ

Last Updated 24 ಜನವರಿ 2021, 20:34 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಸೇರಿದಂತೆ ಯಾವ ಪಕ್ಷದ ಜತೆಗೂ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳದೇ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜೆ.ಪಿ. ನಗರದ ತಮ್ಮ ನಿವಾಸದಲ್ಲಿ ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

’ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಜತೆಗಿನ ಹೊಂದಾಣಿಕೆಯಿಂದಾಗಿ ಪಕ್ಷಕ್ಕೆ ಬಹುದೊಡ್ಡ ಹಾನಿಯಾಗಿದೆ. ಮುಂಬರುವ ಚುನಾವಣೆಯಲ್ಲಿ ಎಡ ಪಕ್ಷಗಳೂ ಸೇರಿದಂತೆ ಯಾವುದೇ ಪಕ್ಷದ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳದಿರಲು ತೀರ್ಮಾನಿಸಿದ್ದೇವೆ‘ ಎಂದರು.

’ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿದ್ದೇವೆ. ಬೂತ್ ಗೆ 10 ಜನರಂತೆ ಯುವಜನರ ತಂಡವನ್ನು ಕಟ್ಟುತ್ತೇವೆ. ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಭಾರಿ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದ್ದೇವೆ‘ ಎಂದರು.

ರಾಜ್ಯ ಸರ್ಕಾರ ಆಮೆ ವೇಗದಲ್ಲಿ ನಡೆಯುತ್ತಿದ್ದು, ಮೈತ್ರಿ ಸರ್ಕಾರವನ್ನು ಬೀಳಿಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಟೇಕಾಫ್ ಆಗದೇ ಮುಗ್ಗರಿಸಿ ಬಿದ್ದಿದೆ. ಮುಖ್ಯಮಂತ್ರಿಗಳು ಭಿನ್ನಮತ ಶಮನದಲ್ಲೇ ಕಾಲ ದೂಡುತ್ತಿದ್ದಾರೆ. ಇದುವರೆಗೂ ಜನರಿಗೆ ಯಾವುದೇ ಹೊಸ ಯೋಜನೆಗಳನ್ನು ಕೊಡಲು ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದರು.

ಆನೇಕಲ್ ಕ್ಷೇತ್ರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಕ್ರಮವಾಗಿ ಕೆ.ಪಿ.ರಾಜು ಹಾಗು ಪ್ರಭಾಕರ ರೆಡ್ಡಿ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದರು. ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT