ಅಂಜನಾದ್ರಿ ದರ್ಶನಕ್ಕೆ ಅವಕಾಶ
ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲ ದರ್ಶನಕ್ಕೆ ಜಿಲ್ಲಾಡಳಿತವು ಭಕ್ತರಿಗೆ ಅವಕಾಶ ಕಲ್ಪಿಸಿದ್ದು, ದರ್ಶನಕ್ಕೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3ರವರೆಗೆ ಸಮಯ ನಿಗದಿಪಡಿಸಿದೆ.
ಮಧ್ಯಾಹ್ನ 3 ರಿಂದ ಮರುದಿನ ಬೆಳಿಗ್ಗೆ 8ರವರೆಗೆ ದೇವಸ್ಥಾನ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ. ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ತಿಳಿಸಿದ್ದಾರೆ.
ಚಿರತೆ ಮತ್ತು ಕರಡಿ ಹಾವಳಿ ಹೆಚ್ಚಿದ್ದ ಕಾರಣ ಭಕ್ತರಿಗೆ ಒಂದು ತಿಂಗಳಿನಿಂದ ದರ್ಶನ ನಿರ್ಬಂಧಿಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.