ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಗೆ ಪತ್ರ ಬರೆಯಲು ಅಲೋಪಥಿ ವೈದ್ಯರ ನಿರ್ಧಾರ

Last Updated 15 ಫೆಬ್ರುವರಿ 2021, 21:07 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲುಅಲೋಪಥಿ ವೈದ್ಯರು ನಿರ್ಧರಿಸಿದ್ದಾರೆ.

ಅಪೆಂಡಿಕ್ಸ್‌, ಪಿತ್ತಕೋಶ, ಹಾನಿಕಾರಕವಲ್ಲದ ಗೆಡ್ಡೆ ತೆಗೆಯುವುದು, ಗ್ಯಾಂಗ್ರಿನ್‌, ಹಲ್ಲಿನ ರೂಟ್‌ಕ್ಯಾನಲ್‌ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲುಆಯುರ್ವೇದ ವೈದ್ಯರಿಗೆ ಅನುಮತಿ ನೀಡಿ, ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿಅಲೋಪಥಿ ವೈದ್ಯರು 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು.

‘ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಿರುವುದನ್ನು ಖಂಡಿಸಿ ಎಲ್ಲ ರಾಜ್ಯಗಳ ವೈದ್ಯರು ಆಯಾ ಶಾಖೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ನೂತನ ಅಧಿಸೂಚನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ’ ಎಂದುಭಾರತೀಯ ವೈದ್ಯಕೀಯ ಸಂಘದ (ಐಎಂಎ) ಬೆಂಗಳೂರು ಶಾಖೆಯ ವಕ್ತಾರಡಾ.ಎಸ್.ಶ್ರೀನಿವಾಸ್ ಮಾಹಿತಿ ನೀಡಿದರು.

‘ರಾಜ್ಯದಲ್ಲಿ178ಐಎಂಎ ಶಾಖೆಗಳಿವೆ. ಆಯಾ ಶಾಖೆಗಳ ವ್ಯಾಪ್ತಿಯಲ್ಲಿರುವಶಾಸಕರು ಹಾಗೂ ಸಂಸದರನ್ನು ಭೇಟಿಯಾಗಿ ಭವಿಷ್ಯದ ಅನಾಹುತಗಳ ಬಗ್ಗೆ ಮನವರಿಕೆ ಮಾಡಲಾಗುವುದು. ವೈದ್ಯಕೀಯ ವಿದ್ಯಾರ್ಥಿಗಳ ಮೇಲೂ ಇದರ ಪರಿಣಾಮ ಬೀರಲಿದ್ದು, ಅವರಿಗೂ ಅರಿವು ಮೂಡಿಸಲಾಗುವುದು.ಕೇಂದ್ರ ಸರ್ಕಾರವು ಅಧಿಸೂಚನೆ ವಾಪಸ್ ಪಡೆಯದಿದ್ದರೆ, ಹೊರರೋಗಿ ವಿಭಾಗ (ಒಪಿಡಿ) ಬಂದ್‌ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT