ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳ್ವಾಸ್‌: ವೈದ್ಯಕೀಯ ಶಿಕ್ಷಣಕ್ಕೆ 377 ಮಂದಿ

Last Updated 9 ಏಪ್ರಿಲ್ 2022, 20:26 IST
ಅಕ್ಷರ ಗಾತ್ರ

ಮೂಡುಬಿದಿರೆ: ‘ರಾಷ್ಟ್ರಮಟ್ಟದ ನೀಟ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ಆಳ್ವಾಸ್ ಪದವಿಪೂರ್ವ ಕಾಲೇಜಿನ 377 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಸಕ್ತವರ್ಷ ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಕಾಲೇಜು ಎಂಬ ಗೌರವಕ್ಕೆ ಆಳ್ವಾಸ್‌ ಕಾಲೇಜು ಪಾತ್ರವಾಗಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.

‘ಹರ್ಷಿತಾ ಗಂಗಾಧರಪ್ಪ ನೆಗಳೂರು, ಶೈಕ್ಷಾ ನಾಯಕ ಅವರು ದೆಹಲಿ ಏಮ್ಸ್‌ಗೆ, ರಕ್ಷಿತ್ ಪರೀಕ್ ರಾಯಬರೇಲಿ ಏಮ್ಸ್‌ಗೆ, ಶಿವರಾಜ್ ಎಂ. ಉಮ್ಮಜಪ್ಪನ್ವರ್ ಪುಣೆಯ ವೈದ್ಯಕೀಯ ಕಾಲೇಜಿಗೆ ಆಯ್ಕೆಯಾಗುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ. ಇದರೊಂದಿಗೆ ರಾಜ್ಯದ ವಿವಿಧ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 213 ವಿದ್ಯಾರ್ಥಿಗಳು, ಖಾಸಗಿ ವೈದ್ಯಕೀಯ ಕಾಲೇಜುಗಳ ಸರ್ಕಾರಿ ಕೋಟದಲ್ಲಿ 106 ವಿದ್ಯಾರ್ಥಿಗಳು, ಖಾಸಗಿ ಕೋಟಾದಲ್ಲಿ 58 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ’ ಎಂದು ಹೇಳಿದರು.

‘30 ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, 15 ಮಂದಿ ಪರಿಶಿಷ್ಟ ಪಂಗಡ, 29 ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಹಾಗೂ 51 ವಿದ್ಯಾರ್ಥಿಗಳು ಹೈದರಾಬಾದ್ ಕರ್ನಾಟಕ ಕೋಟಾದಡಿಯಲ್ಲಿ ಪ್ರವೇಶ ಪಡೆದಿದ್ದಾರೆ. ಈ ಪೈಕಿ 150 ವಿದ್ಯಾರ್ಥಿಗಳು ಆಳ್ವಾಸ್ ದತ್ತು ಸ್ವೀಕಾರ ಶಿಕ್ಷಣ ಯೋಜನೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಗ್ರಾಮೀಣ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಪ್ರತಿವರ್ಷವೂ ದೊಡ್ಡ ಸಂಖ್ಯೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆ ಆಗುತ್ತಿರುವುದು ನಮ್ಮ ಶಿಕ್ಷಣ ಸೇವೆಯ ಸಾರ್ಥಕತೆಗೆ ನಿದರ್ಶನವಾಗಿದೆ’ ಎಂದು ಡಾ. ಮೋಹನ ಆಳ್ವ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT