ಶನಿವಾರ, ಜುಲೈ 24, 2021
26 °C

ಫ್ಲಿಪ್‌ಕಾರ್ಟ್‌, ಅಮೆಜಾನ್‌ನಿಂದ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆದೇಶಿಸಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂಬ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿವೆ.

ಇ–ಕಾಮರ್ಸ್‌ ಎಂದರೆ ಮಾರುಕಟ್ಟೆಯ ಸ್ಥಳಗಳೇ ಹೊರತು ಉತ್ಪಾದನಾ ಕ್ಷೇತ್ರವಲ್ಲ ಎಂಬ ಅಂಶವನ್ನು ಏಕಸದಸ್ಯ ಪೀಠ ಪರಿಗಣಿಸಿಲ್ಲ ಎಂದು ಫ್ಲಿಪ್‌ಕಾರ್ಟ್‌ ಪರ ವಕೀಲ ಹರೀಶ್ ಸಾಳ್ವೆ ವಿವರಿಸಿದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಜೂ.14ಕ್ಕೆ ಮುಂದೂಡಿತು.

ಸ್ಪರ್ಧಾತ್ಮಕ ವಿರೋಧಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ –2020 ಅನ್ನು ಈ ಸಂಸ್ಥೆಗಳು ಉಲ್ಲಂಘಿಸುತ್ತಿವೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿತ್ತು. ದೆಹಲಿಯ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಂಘಟನೆಯಾದ ದೆಹಲಿ ವ್ಯಾಪಾರ ಮಹಾಸಂಘದ ಮಾಹಿತಿ ಆಧರಿಸಿ ಈ ತನಿಖೆಗೆ ಸಿಸಿಐ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು 2020 ಜನವರಿ 13ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.  ಏಕ ಸದಸ್ಯ ಪೀಠ ಈ ಅರ್ಜಿ ವಜಾಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು