ಮಂಗಳವಾರ, ಸೆಪ್ಟೆಂಬರ್ 21, 2021
28 °C

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಹಿನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇ–ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆದೇಶಿಸಿರುವ ತನಿಖೆ ಪ್ರಶ್ನಿಸಿ ಈ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ.

‌ಸ್ಪರ್ಧಾ ಕಾಯ್ದೆ 2002 ಉಲ್ಲಂಘನೆ ಮಾಡಿಲ್ಲ ಎಂಬುದಾದರೆ ತನಿಖೆಗೆ ಅರ್ಜಿದಾರರು ಹಿಂಜರಿಯಬಾರದು. ಈ ಹಂತದಲ್ಲಿ ತನಿಖೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮುರ್ತಿ ಸತೀಶ್‌ಚಂದ್ರ ಶರ್ಮಾ ಅವರಿದ್ದ ಪೀಠ ಹೇಳಿತು.

ದೆಹಲಿಯ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಂಘಟನೆಯಾದ ದೆಹಲಿ ವ್ಯಾಪಾರ ಮಹಾಸಂಘವು ಸಿಸಿಐಗೆ ದೂರು ನೀಡಿತ್ತು. ವಸ್ತುಗಳ ಮೇಲೆ ಅತೀ ಹೆಚ್ಚು ರಿಯಾಯಿತಿ ನೀಡಯವ ಸ್ಪರ್ಧಾತ್ಮಕ ವಿರೋಧಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ –2002 ಅನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು 2020 ಜನವರಿ 13ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಏಕಸದಸ್ಯ ಪೀಠ ಈ ಅರ್ಜಿ ವಜಾಗೊಳಿಸಿತ್ತು. ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು