ಸೋಮವಾರ, ನವೆಂಬರ್ 28, 2022
20 °C

ಅಂಬೇಡ್ಕರ್ ನಿಗಮ: ಕುರ್ಚಿ ಏರಿದ ಸುರೇಶ್‌ ನಾಯ್ಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಾ.ಬಿ. ಆರ್‌. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಕುರ್ಚಿಗಾಗಿ ನಡೆದ ‘ಗುದ್ದಾಟ’ ಅಂತ್ಯಗೊಂಡಿದ್ದು, ಕೆ.ಎನ್‌. ಸುರೇಶ್‌ ನಾಯ್ಕ್‌ ಅವರು ಸೋಮವಾರದಿಂದ ಕರ್ತವ್ಯ ನಿರತರಾಗಿದ್ದಾರೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಲಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್‌ ಕುಮಾರ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ, ಆ ಜಾಗಕ್ಕೆ ಸುರೇಶ್‌ ನಾಯ್ಕ್‌ ಅವರನ್ನು ನಿಯೋಜಿಸಿತ್ತು. ಆದರೆ, ಸುರೇಶ್‌ ಕುಮಾರ್‌ ‘ಕುರ್ಚಿ’ ಬಿಟ್ಟು ಕೊಡದ ಕಾರಣ ಗೊಂದಲ ಉಂಟಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಸೋಮವಾರದ ಸಂಚಿಕೆಯಲ್ಲಿ ವರದಿ ಮಾಡಿತ್ತು.

‘ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಅವರು, ಸುರೇಶ್‌ ಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಕುರ್ಚಿ ಬಿಟ್ಟುಕೊಟ್ಟು, ಕರ್ತವ್ಯ ನಿಭಾಯಿಸಲು ಸುರೇಶ್‌ ನಾಯ್ಕ್‌ ಅವರಿಗೆ ಅವಕಾಶ ಮಾಡಿಕೊಡುವಂತೆ ತಾಕೀತು ಮಾಡಿದ್ದರು’ ಎಂದು ನಿಗಮದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.