ಭಾನುವಾರ, ಮೇ 22, 2022
25 °C

ಅಂಬಿಗರ ಚೌಡಯ್ಯನವರ ವಚನ ಸಾಹಿತ್ಯ ಭಾಷಾಂತರವಾಗಲಿ- ಉದ್ಯಮಿ ಯೋಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಅಂಬಿಗರ ಚೌಡಯ್ಯನವರ ವಚನ ಸಾಹಿತ್ಯವು ಭಾಷಾಂತರವಾಗಬೇಕು. ಆಗ ಮಾತ್ರ ಇತರ ಭಾಷಿಕರಿಗೂ ಅವರ ಸಾಹಿತ್ಯ ತಲುಪಿಸಲು ಸಾಧ್ಯ’ ಎಂದು ಉದ್ಯಮಿ ಯೋಗೇಶ್ ಅಭಿಪ್ರಾಯಪಟ್ಟರು.

ಹಾವೇರಿ ಜಿಲ್ಲೆ ಚೌಡದಾನಪುರದಲ್ಲಿ ನಡೆದ ಅಂಬಿಗರ ಚೌಡಯ್ಯನವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಮಾತನಾಡಿದರು. 

‘ಚೌಡಯ್ಯನವರ ವಚನ ಸಾಹಿತ್ಯವನ್ನು ದೇಶದ ಎಲ್ಲ ಜನಾಂಗದವರೂ ಅಧ್ಯಯನ ಮಾಡುವಂತಾಗಬೇಕು. ಅವರ ಸಾಹಿತ್ಯವು ಪದವಿ ತರಗತಿಯ ಪಠ್ಯ ವಿಷಯವಾಗಬೇಕು. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಬೇಕು. ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಬೇಕು’ ಎಂದು ತಿಳಿಸಿದರು.     

ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಬಸವರಾಜ್, ವೆಂಕಟೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು