ಭಾನುವಾರ, ಏಪ್ರಿಲ್ 11, 2021
23 °C

ಪ್ರೊ. ಶಿವಪ್ರಕಾಶ ಅವರಿಗೆ ಅಂಬಿಕಾತನಯದತ್ತ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯು ಪ್ರೊ. ಎಚ್‌.ಎಸ್.ಶಿವಪ್ರಕಾಶ ಅವರಿಗೆ ಲಭಿಸಿದೆ.

ಪ್ರಶಸ್ತಿ ₹1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಆಯ್ಕೆಯಲ್ಲಿ ಡಾ. ಗುರುಪಾದ ಮರೆಗುದ್ದಿ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಪ್ರೊ. ಶಿವಾನಂದ ಕೆಳಗಿನಮನಿ, ಡಾ. ತಾರಿಣಿ ಶುಭದಾಯಿನಿ ಇದ್ದರು.

ಡಾ. ದ.ರಾ.ಬೇಂದ್ರೆ ಅವರ 125ನೇ ಜನ್ಮದಿಚಾರಣೆ ಸಂದರ್ಭದಲ್ಲಿ ಜ. 31ರಂದು ನಗರದ ಬೇಂದ್ರೆ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ.ಹಿರೇಮಠ ಮಂಗಳವಾರ ಇಲ್ಲಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು