ಸೋಮವಾರ, ಸೆಪ್ಟೆಂಬರ್ 28, 2020
21 °C

ಉಪನ್ಯಾಸಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಉಪನ್ಯಾಸಕರ ವರ್ಗಾವಣೆ ಕಾಯ್ದೆ –2016 ಅನ್ನು ವಾಪಸ್‌ ಪಡೆದು, ತಿದ್ದುಪಡಿ ಮಸೂದೆಯನ್ನು ಸದ್ಯವೇ ನಡೆಯ
ಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳ ಸದಸ್ಯರ ಜತೆ ಬುಧವಾರ ನಡೆಸಿದ ಸಮಾಲೋಚನೆ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

‘ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಿ, ಕಳೆದ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಉದ್ದೇಶಿಸಲಾಗಿತ್ತು. ಆದರೆ, ಕಾಯ್ದೆಯಲ್ಲಿ ಹಲವು ದೋಷಗಳಿದ್ದ ಕಾರಣ ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ’ ಎಂದರು.

‘ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಿಸಲು ಸುಗ್ರೀವಾಜ್ಞೆ ತರಲಾಗಿದ್ದು, ಅದಕ್ಕೂ ಒಪ್ಪಿಗೆ ಪಡೆಯಲಾಗುವುದು’ ಎಂದು ಅಶ್ವತ್ಥನಾರಾಯಣ ಹೇಳಿದರು. ಆಗ, ‘ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳನ್ನು ನೇಮಿಸಬೇಡಿ’ ಎಂದು ವೈ.ಎ. ನಾರಾಯಣ ಸ್ವಾಮಿ ಸಲಹೆ ನೀಡಿದರು.

‘ಸೇವಾ ಹಿರಿತನಕ್ಕಿಂತ ಕಾರ್ಯನಿರ್ವಹಣೆಯ ದಕ್ಷತೆ ಪರಿಗಣಿಸಿ ಬಡ್ತಿ ನೀಡಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.