ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೆಡಿಟ್ ಗ್ಯಾರಂಟಿ ನಿಧಿ ತಿದ್ದುಪಡಿಯಿಂದ ಹೊಸ ಉದ್ಯೋಗವಕಾಶ ಸೃಷ್ಟಿ: ಸಿಎಂ

Last Updated 22 ಮಾರ್ಚ್ 2023, 11:24 IST
ಅಕ್ಷರ ಗಾತ್ರ

ಬೆಂಗಳೂರು: ಸರಳವಾಗಿ ಹಣಕಾಸಿನ ನೆರವನ್ನು ಪಡೆಯುವ ನಿಟ್ಟಿನಲ್ಲಿ ಕ್ರೆಡಿಟ್ ಗ್ಯಾರಂಟಿ ನಿಧಿಗೆ ಕೆಲವು ಅವಶ್ಯಕ ತಿದ್ದುಪಡಿ ತಂದಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದು, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆ ಹಾಗೂ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಭಾರತದ ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗೆ ಇಂಬು ನೀಡಲು, ಸ್ವಸಹಾಯ ಸಂಘಗಳು ಮತ್ತು ಜಂಟಿ ಬಾಧ್ಯತಾ ಗುಂಪುಗಳು ಕೈಗೊಳ್ಳುವ ಕಿರು ಉದ್ದಿಮೆಗಳಿಗೆ ಹೆಚ್ಚಿನ ರೀತಿಯಲ್ಲಿ, ಸರಳವಾಗಿ ಹಣಕಾಸಿನ ನೆರವನ್ನು ಪಡೆಯುವ ನಿಟ್ಟಿನಲ್ಲಿ ಕ್ರೆಡಿಟ್ ಗ್ಯಾರಂಟಿ ನಿಧಿಗೆ ಕೆಲವು ಅವಶ್ಯಕ ತಿದ್ದುಪಡಿ ತಂದಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

ಇದು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡುವ ಜೊತೆಗೆ ಸ್ಥಳೀಯ ಮಟ್ಟದಲ್ಲಿ ಹೊಸ ಉದ್ಯೋಗವಕಾಶಗಳನ್ನು ಸೃಜಿಸುತ್ತದೆ. ಈ ಮಹತ್ವದ ನಿರ್ಧಾರಕ್ಕೆ ಮೂಲ ಕಾರಣರಾದ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT