ಶುಕ್ರವಾರ, ಜೂನ್ 25, 2021
25 °C

ಕನ್ನಡಿಗನಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೂರ್ಯನಾರಾಯಣ ವಾರಂಬಳ್ಳಿ

ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕ ಹಾಗೂ ಸಂಶೋಧಕ ಸೂರ್ಯನಾರಾಯಣ ವಾರಂಬಳ್ಳಿ ಅವರು ಪ್ರತಿಷ್ಠಿತ ‘ಅಮೇರಿಕನ್ ಕ್ಯಾನ್ಸರ್ ರಿಸರ್ಚ್‌ ಅವಾರ್ಡ್‌’ಗೆ ಭಾಜನರಾಗಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನವರಾದ ಇವರು, ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಎಚ್‌.ಡಿ ಪದವಿ ಪಡೆದಿದ್ದರು. ಕಳೆದ 20 ವರ್ಷಗಳಿಂದ ಕ್ಯಾನ್ಸರ್‌ ಕಾಯಿಲೆಗೆ ಸಂಬಂಧಿಸಿದ ಸಂಶೋಧನೆಗಳನ್ನು ನಡೆಸುತ್ತಿದ್ದಾರೆ. ವಿವಿಧ ವಿಜ್ಞಾನ ನಿಯತಕಾಲಿಕೆಗಳಲ್ಲಿ ಇವರ 130ಕ್ಕೂ ಅಧಿಕ ಲೇಖನಗಳು ಪ್ರಕಟಗೊಂಡಿವೆ. ಕ್ಯಾನ್ಸರ್ ಕಾಯಿಲೆಗೆ ಇವರು ನಡೆಸುತ್ತಿರುವ ಸಂಶೋಧನೆಗಳನ್ನು ಪರಿಗಣಿಸಿ ಅಸೋಸಿಯೇಷನ್ ಆಫ್ ಅಮೆರಿಕನ್ ಏಷ್ಯನ್ ಸೈಂಟಿಸ್ಟ್ಸ್ ಸಂಸ್ಥೆಯು ಪ್ರಶಸ್ತಿ ನೀಡಿ ಗೌರವಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು