ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿವಿಬಿ ಅಮೃತ ‌ಮಹೋತ್ಸವ‌, ₹25 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಶಾ

Last Updated 28 ಜನವರಿ 2023, 7:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದ ಕೆಎಲ್ಇ ಸಂಸ್ಥೆ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಅಮೃತ ಮಹೋತ್ಸವ ಸಮಾರಂಭ ಹಾಗೂ ₹25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬೃಹತ್ ಒಳಾಂಗಣ ಕ್ರೀಡಾಂಗಣವನ್ಜು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸೇವೆ ಮಾಡುತ್ತಿರುವ ಕೆಎಲ್ಇ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಆಚರಿಸುತ್ತಿದೆ.‌ ಇಂತಹ ಸಂಭ್ರಮದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ ಎಂದರು.

'ವಿಶ್ವದಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿದೆ. ದೇಶವು ವಿಶ್ವದ 5ನೇ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. 2030ರ ವೇಳೆಗೆ ಭಾರತವು ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ದೇಶದ ಯುವಜನರ ಪಾತ್ರ ಮಹತ್ವದಾಗಿದೆ ಎಂದು ತಿಳಿಸಿದರು.

ತಿರುಪತಿಯ ವಿಶ್ವ ಧರ್ಮ ಚೇತನ ಮಂಚನ ಬ್ರಹ್ಮಶ್ರೀ ಗುರುದೇವ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, , ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಜಗದೀಶ ಶೆಟ್ಟರ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮುರುಗೇಶ ನಿರಾಣಿ, ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ, ಕೆಎಲ್ಇ ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT