ಅಮಿತ್ ಶಾ ಭೇಟಿಗೆ ಆಗಮಿಸಿದ ಬಿಜೆಪಿ ಮುಖಂಡರು; ಬಿಗಿ ಭದ್ರತೆ

ಹುಬ್ಬಳ್ಳಿ: ಧಾರವಾಡದಲ್ಲಿ ವಿಧಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ಶಂಕುಸ್ಥಾಪನೆಗೆ ನಗರಕ್ಕೆ ಬಂದಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಗೆ ಬಿಜೆಪಿ ನಾಯಕರು ಡೆನಿಸನ್ಸ್ ಹೋಟೆಲ್'ಗೆ ಆಗಮಿಸುತ್ತಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶುಕ್ರವಾರ ರಾತ್ರಿ 11.30ಕ್ಕೆ ಬಂದಿರುವ ಶಾ, ಡೆನಿಸನ್ಸ್ ಹೋಟೆಲ್'ನಲ್ಲಿ ವಾಸ್ತವ್ಯ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಶಾಸಕರಾದ ಅರವಿಂದ ಬೆಲ್ಲದ, ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಸೇರಿದಂತೆ ಮಾಜಿ ಶಾಸಕರು, ಪಾಲಿಕೆ ಸದಸ್ಯರು, ಬ್ಲಾಕ್ ಕಮಿಟಿ ಅಧ್ಯಕ್ಷರು ಆಗಮಿಸುತ್ತಿದ್ದಾರೆ. ಪಾಸ್ ಪಡೆದವರಿಗಷ್ಟೇ ಹೋಟೆಲ್ ಒಳಗೆ ಪ್ರವೇಶ ನೀಡಲಾಗುತ್ತಿದೆ.
'ಹೋಟೆಲ್'ನ ಆರನೇ ಮಹಡಿಯ ಸಭಾಭವನದಲ್ಲಿ ಸಚಿವ ಶಾ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭಕೋರಿ, ಸನ್ಮಾನ ನಡೆಸಲಾಗಿದೆ. ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಶಾ ಮಾಹಿತಿ ಪಡೆಯುತ್ತಿದ್ದಾರೆ' ಎಂದು ಮೂಲಗಳು ತಿಳಿಸಿವೆ.
ಡೆನಿಸನ್ಸ್ ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೋಟೆಲ್ ಎದುರಿನ ರಸ್ತೆಯ ಎರಡು ಕಡೆ ಪೊಲೀಸ್ ವ್ಯಾನ್ ನಿಲ್ಲಿಸಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೋಟೆಲ್'ಗೆ ತೆರಳುವವರನ್ನು ಸೂಕ್ಷ್ಮವಾಗಿ ಪರೀಕ್ಷಿಸಿ ಬಿಡಲಾಗುತ್ತಿದೆ.
ಹುಬ್ಬಳ್ಳಿ: ಧಾರವಾಡದಲ್ಲಿ ವಿಧಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ಶಂಕುಸ್ಥಾಪನೆಗೆ ನಗರಕ್ಕೆ ಬಂದಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಗೆ ಬಿಜೆಪಿ ನಾಯಕರು ಡೆನಿಸನ್ಸ್ ಹೋಟೆಲ್'ಗೆ ಆಗಮಿಸುತ್ತಿದ್ದಾರೆ.#amitshah #basavarajbommai #bsyediyurappa #BJP #hubballi #dharwad pic.twitter.com/1Oa6ptORCM
— Prajavani (@prajavani) January 28, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.