ಶನಿವಾರ, ಸೆಪ್ಟೆಂಬರ್ 18, 2021
22 °C

ಯಡಿಯೂರಪ್ಪ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅವರು ತಮ್ಮ ಬುದ್ಧಿವಂತಿಕೆ ಮತ್ತು ಅನುಭವವನ್ನು ಬಳಸಿಕೊಂಡು ರಾಜ್ಯದ ಬಡವರಿಗೆ ಮತ್ತು ರೈತರಿಗೆ ಸೇವೆ ಸಲ್ಲಿಸುವ ಬಿಜೆಪಿಯ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸಲಿದ್ದಾರೆ ಎಂದು ನಂಬಿರುವುದಾಗಿ ಹೇಳಿದ್ದಾರೆ.

ಇದೇವೇಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸೇವೆಯನ್ನೂ ಅಮಿತ್ ಶಾ ಶ್ಲಾಘಿಸಿದ್ದಾರೆ.

ಬಿ.ಎಸ್‌. ಯಡಿಯೂರಪ್ಪನವರು ಬಿಜೆಪಿ ಪಕ್ಷ ಮತ್ತು ಕರ್ನಾಟಕದ ಜನರಿಗೆ ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ತಳಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆ ಮತ್ತು ಕಠಿಣ ಪರಿಶ್ರಮ ನಿಜಕ್ಕೂ ಸ್ಫೂರ್ತಿದಾಯಕವಾದದ್ದು. ಪಕ್ಷ ಮತ್ತು ಸರ್ಕಾರಕ್ಕೆ ಅವರ ಮಾರ್ಗದರ್ಶನದ ಅಗತ್ಯವಿದೆ. ಅವರು ಅದನ್ನು ಮುಂದುವರಿಸುತ್ತಾರೆ ಎಂದು ನಂಬಿರುವುದಾಗಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು