ಬುಧವಾರ, ಅಕ್ಟೋಬರ್ 20, 2021
29 °C

ಚರ್ಚೆಗೆ ಗ್ರಾಸವಾದ ಮಾಮನಿ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರು ಈ ಅಧಿವೇಶನದಲ್ಲಿ ಈವರೆಗೆ ಕಲಾಪಕ್ಕೆ ಹಾಜರಾಗದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಇದೇ 13 ರಿಂದ ಅಧಿವೇಶನ ಆರಂಭವಾಗಿದ್ದು, ಒಂದೂ ದಿನ ಅವರು ಕಲಾಪಕ್ಕೆ ಹಾಜರಾಗಿಲ್ಲ. ಇದರಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೇಲೆ  ಕಲಾಪದ ಕಾರ್ಯಭಾರದ ಒತ್ತಡ ಅಧಿಕವಾಗಿದೆ. ಸಭಾಧ್ಯಕ್ಷ ಕಾರ್ಯನಿರ್ವಹಣೆಯ ಪ್ಯಾನಲ್‌ನ ಇತರ ಸದಸ್ಯರನ್ನು ಬಳಸಿ ಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಆನಂದ
ಮಾಮನಿ, ಸದನಕ್ಕೆ ಗೈರಾಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.