ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಬುಡಕಟ್ಟು ವಿವಿ: ಕಟ್ಟೀಮನಿ ಮೊದಲ ಕುಲಪತಿ

Last Updated 17 ಆಗಸ್ಟ್ 2020, 18:38 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಸದಸ್ಯ, ಶಿಕ್ಷಣ ತಜ್ಞ ಪ್ರೊ.ತೇಜಸ್ವಿ ಕಟ್ಟೀಮನಿ ಅವರು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ (ಸಿಟಿಯುಎಪಿ) ಮೊದಲ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಈ ನೇಮಕ ಮಾಡಿದ್ದಾರೆ.

ತೇಜಸ್ವಿಯವರು ಅಮರಕಂಟಕ್‌ನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾಗಿ, ಹೈದರಾಬಾದ್‌ ಮೌಲಾನಾ ಆಜಾದ್‌ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಅವರು ಕೊಪ್ಪಳ ಜಿಲ್ಲೆಯ ಅಳವಂಡಿ ಮೂಲದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT