ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಮೂಲಸೌಕರ್ಯ: ವಿವರ ಕೇಳಿದ ಹೈಕೋರ್ಟ್

Last Updated 15 ಮಾರ್ಚ್ 2021, 19:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದರೆ ಆ ಕುರಿತ ಮಾರ್ಗಸೂಚಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಮಾಹಿತಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅಂಗನವಾಡಿಗಳು ಮುಚ್ಚಿದ್ದರಿಂದ ಮಕ್ಕಳ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿದ್ದವು. ಇದರಿಂದಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ –2013 ರ ಪ್ರಕಾರ ಪೌಷ್ಠಿಕಾಂಶದ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ಪೂರೈಸಬೇಕು ಎಂದು ರಾಜ್ಯಗಳಿಗೆಸುಪ್ರೀಂ ಕೋರ್ಟ್ 2021ರ ಜನವರಿಯಲ್ಲಿ ನಿರ್ದೇಶನ ನೀಡಿತ್ತು.

‘ಇದು ಮಕ್ಕಳಿಗೆ ಮಾತ್ರ ಸೀಮಿತವಲ್ಲ. ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಠಿಕತೆಗೂ ಸಂಬಂಧಿಸಿದ ವಿಷಯ. ಹೀಗಾಗಿ, ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT