ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ನೌಕರರ ಪ್ರತಿಭಟನೆ ಅಂತ್ಯ

Last Updated 6 ಮಾರ್ಚ್ 2022, 4:21 IST
ಅಕ್ಷರ ಗಾತ್ರ

ಬೆಂಗಳೂರು: ಕೆಲ ಬೇಡಿಕೆ ಈಡೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರಿಂದ ಅಂಗನವಾಡಿ ನೌಕರರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶನಿವಾರ ಅಂತ್ಯಗೊಳಿಸಿದ್ದಾರೆ.

‘ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‌ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರದಿಂದ ಪ್ರತಿಭಟನೆ ಆರಂಭಿಸಲಾಗಿತ್ತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಅಂಗನವಾಡಿ ನೌಕರರು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರದಿಂದ ಯಾವುದೇ ಭರವಸೆ ಸಿಗದಿದ್ದರಿಂದ ಉದ್ಯಾನದಲ್ಲಿ ಅಹೋ ರಾತ್ರಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಕೆಲ ಬೇಡಿಕೆ ಈಡೇರಿಸಿದ ಆದೇಶವನ್ನು ಮುಖಂಡರಿಗೆ ನೀಡಿದರು. ಬಳಿಕ ಅಂಗನವಾಡಿ ನೌಕರರು ಪ್ರತಿಭಟನೆ ಹಿಂಪಡೆದರು.

‘ಅನುಕಂಪ ಆಧಾರದಲ್ಲಿ ಮಗಳು ಮತ್ತು ಸೊಸೆಗೂ ಕೆಲಸ ಕೊಡುವ ಹಾಗೂ ಕೋಳಿ ಮೊಟ್ಟೆ ಖರೀದಿಗೆ ಮುಂಗಡವಾಗಿ ಹಣ ನೀಡುವುದಾಗಿ ಆದೇಶ ಹೊರಡಿ ಸಲಾಗಿದೆ. ಇದರ ಪ್ರತಿಯನ್ನು ಅಧಿ ಕಾರಿಗಳು ನಮಗೆ ನೀಡಿದ್ದಾರೆ. ಉಳಿದ ಬೇಡಿಕೆ ಈಡೇರಿಸುವ ಜಂಟಿ ಸಭೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಹೀಗಾಗಿ, ಪ್ರತಿಭಟನೆ ಹಿಂಪಡೆಯಲಾಗಿದೆ’ ಎಂದು ಸಿಐಟಿಯು ಅಧ್ಯಕ್ಷೆಎಸ್. ವರಲಕ್ಷ್ಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT