ಶನಿವಾರ, ಸೆಪ್ಟೆಂಬರ್ 25, 2021
22 °C

ಫೇಸ್‌ಬುಕ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೊ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಸಾಮಾಜಿಕ ಜಾಲತಾಣ ‘ಫೇಸ್‌ಬುಕ್‌’ಗೆ ಮಕ್ಕಳ ಅಶ್ಲೀಲ ವಿಡಿಯೊ ಅಪ್‌ಲೋಡ್ ಮಾಡಿದ ಅಂಕೋಲಾದ ವ್ಯಕ್ತಿಯೊಬ್ಬರ ವಿರುದ್ಧ ಇಲ್ಲಿನ ಸಿ.ಇ.ಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‌2020ರ ಜೂನ್ 28ರಂದು ಸಂಜೆ 6.15ಕ್ಕೆ ವಿಡಿಯೊ ಅಪ್‌ಲೋಡ್ ಮಾಡಲಾಗಿತ್ತು. ಇದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೊದ ಬೆಂಗಳೂರು ಘಟಕದಲ್ಲಿ ಪತ್ತೆ ಹಚ್ಚಲಾಗಿತ್ತು. ಈ ಬಗ್ಗೆ ಕಾರವಾರ ಸಿ.ಇ.ಎನ್ ಠಾಣೆಗೆ ಮಾಹಿತಿ ರವಾನಿಸಲಾಗಿತ್ತು. ಅದನ್ನು ಆಧರಿಸಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು