ಶುಕ್ರವಾರ, ಸೆಪ್ಟೆಂಬರ್ 17, 2021
25 °C

ಮೇಕೆದಾಟು – ಅಣ್ಣಾಮಲೈ ಬೆಂಬಲಿಸುವ ಮೂಲಕ ಬಿಜೆಪಿಯಿಂದ ರಾಜ್ಯದ್ರೋಹ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆ ಬಗ್ಗೆ ಪಕ್ಷದ ರಾಜ್ಯ ನಾಯಕರು ಸೊಲ್ಲೆತ್ತದಿರುವುದು ಆ ಪಕ್ಷವು ರಾಜ್ಯದ್ರೋಹಿ ಎನ್ನಲು ಸಾಕ್ಷಿ ಎಂದು ಕಾಂಗ್ರೆಸ್ ಟೀಕಿಸಿದೆ.

‘ಒಂದೆಡೆ ಅಣ್ಣಾಮಲೈ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿನಿಮೀಯ ಡೈಲಾಗ್ ಹೊಡೆಯುತ್ತಾರೆ. ಇನ್ನೊಂದೆಡೆ ಪಕ್ಷದ ನಾಯಕ ಸಿ.ಟಿ.ರವಿ ಅವರು ಅಣ್ಣಾಮಲೈ ಅವರನ್ನು ಬೆಂಬಲಿಸುತ್ತಾರೆ. ಈ ನಾಟಕದಿಂದ ಕನ್ನಡಿಗರನ್ನು ಮೂರ್ಖರನ್ನಾಗಿಸಲು ಬಿಜೆಪಿ ಯತ್ನಿಸುತ್ತಿದೆ. ಮೋದಿ ಸರ್ಕಾರ ತಮಿಳುನಾಡಿನ ಪರ ಇರಲಿದೆ ಎಂಬ ಅಣ್ಣಾಮಲೈ ಹೇಳಿಕೆಗೆ ಬಿಜೆಪಿಯ ಯಾವ ನಾಯಕರೂ ಮಾತನಾಡದಿರುವುದು ಬಿಜೆಪಿ ರಾಜ್ಯದ್ರೋಹಿ ಎನ್ನಲು ಸಾಕ್ಷಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಓದಿ: 

‘ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ರಾಜ್ಯದ ಮೇಕೆದಾಟು ಯೋಜನೆಯ ವಿರುದ್ಧ ಪ್ರತಿಭಟಿಸಿದ್ದನ್ನು ಸಿ.ಟಿ.ರವಿ ರಿಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿಯ ಕರ್ನಾಟಕ ವಿರುದ್ಧದ ನಿಲುವು ಬಯಲಾಗಿದೆ. ರಾಜ್ಯ ವಿರೋಧಿ ಬಿಜೆಪಿಯಿಂದ ಕನ್ನಡಿಗರಿಗೆ ಅನ್ಯಾಯವೇ ಹೊರತು ನಯಾಪೈಸೆ ಉಪಯೋಗವಿಲ್ಲ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು