ಮತಾಂತರ ಕಾಯ್ದೆ ಯಾರನ್ನೂ ಗುರಿಯಾಗಿಸಿ ಅಲ್ಲ: ಆರಗ

ಬೆಂಗಳೂರು: ‘ಯಾವುದೇ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಪ್ರಸ್ತಾವಿತ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಉದ್ದೇಶ ಇಲ್ಲ’ ಎಂದು ಕ್ರೈಸ್ತ ಸಮುದಾಯದ ಮುಖಂಡರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
‘ಸಮಗ್ರ ಸಾಮಾಜಿಕ ಹಿತಾಸಕ್ತಿ ಹಾಗೂ ಎಲ್ಲ ಧರ್ಮೀಯರೂ, ತಮ್ಮ ತಮ್ಮ ಧರ್ಮವನ್ನು ಶಾಂತಿ ಹಾಗೂ ಸಹಬಾಳ್ವೆಯಿಂದ ಆಚರಿಸಲು ಪೂರಕವಾಗುವಂತೆ ಕಾಯ್ದೆ ರೂಪಿಸಲು ಚಿಂತನೆ ನಡೆದಿದೆ’ ಎಂದೂ ಅವರು ಹೇಳಿದರು.
ಮತಾಂತರ ನಿಷೇಧ ಕಾಯ್ದೆ ತರುವ ಕುರಿತು ಕ್ರೈಸ್ತ ಸಮುದಾಯದ ಮುಖಂಡರು ಸಚಿವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು. ‘ಬಲವಂತದ ಮತಾಂತರವನ್ನು ನಾವೂ ವಿರೋಧಿಸುತ್ತೇವೆ’ ಎಂದೂ ಮುಖಂಡರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.