ಮಂಗಳವಾರ, ಏಪ್ರಿಲ್ 20, 2021
26 °C

ಅಪಾರ್ಟ್‌ಮೆಂಟ್: ವಾರದಲ್ಲಿ 8 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಲಸಂದ್ರದ ವಸಂತಪುರದಲ್ಲಿನ ಅಪಾರ್ಟ್‌ಮೆಂಟ್ ಸಮುಚ್ಛಯವೊಂದರಲ್ಲಿ ಒಂದು ವಾರದ ಅವಧಿಯಲ್ಲಿ 8 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ.

ಸಾಯಿ ಕುಟೀರ ಎಂಬ ಅಪಾರ್ಟ್‌ಮೆಂಟ್ ಸಮುಚ್ಛಯದಲ್ಲಿ ಫೆ.25ರಿಂದ ಮಾ.3ರವರೆಗೆ ಕೋವಿಡ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ, ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯ ಕೂಡ ಭರದಿಂದ ಸಾಗಿದೆ. ಅಪಾರ್ಟ್‌ಮೆಂಟ್ ಸಮುಚ್ಛಯದಲ್ಲಿ 40 ಮನೆಗಳಿವೆ. ಅದರಲ್ಲಿ 10 ಮನೆಗಳು ಖಾಲಿಯಿವೆ. ಅಲ್ಲಿ ಸುಮಾರು 108 ಮಂದಿ ವಾಸಿಸುತ್ತಿದ್ದಾರೆ.

ಫೆ.25ರಂದು ಅಲ್ಲಿ ನಾಲ್ಕು ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಬಳಿಕ ಎಲ್ಲ ನಿವಾಸಿಗಳು ಹಾಗೂ ಸಂಪರ್ಕಿತರಿಗೆ ಫೆ.26 ಮತ್ತು ಫೆ.27ರಂದು ಆರ್‌ಟಿ–ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿತ್ತು. ಆ ವೇಳೆ ಮತ್ತಿಬ್ಬರು ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿತು. ಕೋವಿಡ್ ಮಾರ್ಗಸೂಚಿಯ ಪ್ರಕಾರ ಸಂಪರ್ಕಿತರಿಗೆ 7ನೇ ದಿನ ಎರಡನೇ ಬಾರಿ ಪರೀಕ್ಷೆ ನಡೆಸಬೇಕಾಗುತ್ತದೆ. ಅದರಂತೆ ಮಾ.3ರಂದು 60 ಮಂದಿಗೆ ಎರಡನೇ ಬಾರಿ ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಮತ್ತೆ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

‘ಅಪಾರ್ಟ್‌ಮೆಂಟ್ ಸಮುಚ್ಛಯದ ಎಲ್ಲ ಮಹಡಿಗಳನ್ನು ಸೋಂಕು ನಿವಾರಕದಿಂದ ಸ್ವಚ್ಛಪಡಿಸಲಾಗಿದೆ. ಮಾರ್ಗಸೂಚಿ ಅನುಸಾರ ಕ್ಲಸ್ಟರ್ ಎಂದು ಘೋಷಿಸಿ, ಕಂಟೈನ್‌ಮೆಂಟ್‌ಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು