ಬೆಂಗಳೂರು: ‘ರಾಜ್ಯದ 12 ಜಿಲ್ಲೆಗಳಲ್ಲಿ ಉಂಟಾಗಿರುವ ಮಳೆ ಮತ್ತು ಪ್ರವಾಹದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮವಾರ ಮಾಹಿತಿ ನೀಡಲಿದ್ದು, ಇದೇ ವೇಳೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ತುರ್ತು ನೆರವು ಕೇಳಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

‘ಪ್ರಧಾನಿ ಜತೆ ಬೆಳಿಗ್ಗೆ 11.30 ಕ್ಕೆ ವಿಡಿಯೊ ಸಂವಾದ ನಡೆಯಲಿದೆ. ಅದಕ್ಕೂ ಮೊದಲೇ ಮುಖ್ಯಕಾರ್ಯದರ್ಶಿ ಜತೆ ಸಭೆ ನಡೆಸಿ, ಪ್ರಧಾನಿಯವರ ಮುಂದೆ ಏನೆಲ್ಲ ಬೇಡಿಕೆಗಳನ್ನು ಇಡಬೇಕು ಎಂಬುದನ್ನು ತೀರ್ಮಾನಿಸಲಾಗುವುದು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೂ ಇರುತ್ತಾರೆ’ ಎಂದು ಅಶೋಕ ‘ಪ್ರಜಾವಾಣಿ’ಗೆ ತಿಳಿಸಿದರು.

ನಿರ್ದಿಷ್ಟವಾಗಿ ಎಷ್ಟು ಮೊತ್ತ ಕೇಳಬೇಕು ಎಂಬ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ನಷ್ಟದ ಅಂದಾಜು ಮಾಡುವ ಕಾರ್ಯ ನಡೆದಿದೆ. ಕೆಲವರು ಸಾವಿರಾರು ಕೋಟಿ ನಷ್ಟ ಆಗಿದೆ ಎನ್ನುತ್ತಿದ್ದಾರೆ. ಆ ಮಾಹಿತಿ ಸರಿಯಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಪ್ರಧಾನಿಗೆ ಈ ಇಬ್ಬರು ಸಚಿವರು ರಾಜ್ಯದ ಮಳೆ ಪರಿಸ್ಥಿತಿ ಕುರಿತು ವಿವರಿಸಲಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ. ಕಳೆದ ಒಂದು ವಾರದಿಂದ ಈ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪದಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ (ಎನ್ಡಿಆರ್ಎಫ್) ಅಡಿ ತಕ್ಷಣವೇ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿಗೆ ಸಚಿವರು ಮನವಿ ಮಾಡಲಿದ್ದಾರೆ.

ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್. ವಿಜಯಭಾಸ್ಕರ್ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ ಮೇರೆಗೆ ಪ್ರಾಥಮಿಕ ಹಂತದ ಅಂದಾಜು ನಷ್ಟವನ್ನು ಲೆಕ್ಕ ಹಾಕಿ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

ಮಡಿಕೇರಿ ಜಿಲ್ಲೆಯೊಂದರಲ್ಲೇ ಪ್ರಾಥಮಿಕ ಅಂದಾಜಿನ ಪ್ರಕಾರ ₹ 2 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದ್ದು, ನೂರಾರು ಮನೆಗಳು, ರೈತರು ಬೆಳೆದಿದ್ದ ಕಾಫಿ, ಟೀ, ಮೆಣಸು, ಲವಂಗ ಮತ್ತಿತರ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ನಷ್ಟದ ಪ್ರಮಾಣ ಇನ್ನೂ ಹೆಚ್ಚಾಗುವ ಸಂಭವವಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.

ಚಿಕ್ಕಮಗಳೂರಿನಲ್ಲೂ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಅಡಿಕೆ, ಬಾಳೆ, ಭತ್ತ, ಕಾಫಿ, ಟೀ ಬೆಳೆಗಳು ಕೊಚ್ಚಿ ಹೋಗಿವೆ. ಪ್ರಾಥಮಿಕ ಅಂದಾಜಿನ ಪ್ರಕಾರ ಒಂದು ಸಾವಿರ ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡಬಿದಿರೆ, ಬಂಟ್ವಾಳ ಮತ್ತಿತರ ಕಡೆ ಸತತ ಮಳೆಯಿಂದ ನಷ್ಟ ಉಂಟಾಗಿದೆ. ಕೆಲವು ಕಡೆ ಕಡಲ್ಕೊರೆತ ಉಂಟಾಗಿ ಮನೆಗಳು ಮುಳುಗಡೆಯಾಗಿವೆ. ಜಿಲ್ಲೆಗೆ ಒಂದು ಸಾವಿರ ಕೋಟಿ ತಕ್ಷಣವೇ ಪರಿಹಾರದ ಅಗತ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ವರದಿ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಉಡುಪಿ, ಉತ್ತರ ಕನ್ನಡ, ಬೆಳಗಾವಿಯಲ್ಲೂ ಭೀಕರ ಪ್ರವಾಹ ಎದುರಾಗಿದೆ. ಗದಗ, ಧಾರವಾಡ, ರಾಯಚೂರು, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಪ್ರವಾಹ ಉಂಟಾಗಿದ್ದು, ತಕ್ಷಣವೇ ಸರ್ಕಾರ ಮೊದಲ ಹಂತದಲ್ಲಿ ಹಣ ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

‘ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ’
ಬೆಂಗಳೂರು: ‘ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿ ಪರಿಹಾರ ಕಾರ್ಯಕ್ಕೆ ಹಣವಿಲ್ಲದೆ ರಾಜ್ಯ ಸರ್ಕಾರ ಕೈ ಚೆಲ್ಲುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅಲ್ಲಿಂದಲೇ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.

‘ಕಳೆದ ವರ್ಷದ ನೆರೆ ಹಾವಳಿಯಿಂದ ಉಂಟಾಗಿರುವ ನಷ್ಟಗಳ ಪುನರ್ವಸತಿಗೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ. ಸೋಮಣ್ಣ, ಸುರೇಶ್ ಕುಮಾರ್ ಮತ್ತು ಶಶಿಕಲ್ಲಾ ಜೊಲ್ಲೆ ಅವರಿಗೆ ಕಳೆದ ತಿಂಗಳೇ ಪತ್ರ ಬರೆದು ಮಾಹಿತಿ ಕೇಳಿದ್ದೆ. ಆದರೆ, ಸಚಿವರು ಮಾಹಿತಿ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.