ಬುಧವಾರ, ನವೆಂಬರ್ 25, 2020
25 °C

ಪರಿಷತ್‌ ಮತ ಎಣಿಕೆ ಮುಂದೂಡಿಕೆ ಪ್ರಶ್ನಿಸಿ ಅರ್ಜಿ: ಆಯೋಗಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಮುಂದೂಡಿರುವ ಆದೇಶವನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್‌, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಗಳಿಗೆ ಸೂಚಿಸಿದೆ.

ಆಗ್ನೇಯ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರಗಳು, ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನವೆಂಬರ್‌ 2ರಂದು ಮತ ಎಣಿಕೆ ನಿಗದಿಯಾಗಿತ್ತು. ಅದನ್ನು ನ. 10ಕ್ಕೆ ಮುಂದೂಡಿ ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದರು.

ಮತ ಎಣಿಕೆ ಮುಂದೂಡಿರುವುದನ್ನು ಪ್ರಶ್ನಿಸಿ ನ್ಯೂಸ್‌ ಇಂಡಿಯಾ ವೋಟರ್ಸ್‌ ಫೋರಂ, ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಚುನಾವಣಾ ಆಯೋಗಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದೆ. ‘ಮತ ಪೆಟ್ಟಿಗೆಗಳನ್ನು ಇರಿಸಿರುವ ಸ್ಥಳಗಳಲ್ಲಿ ಭದ್ರತೆ ಕೊರತೆ ಇದೆ. ಅಲ್ಲಿಗೆ ಹಲವು ಕಡೆಗಳಿಂದ ಸಂಪರ್ಕ ಸಾಧ್ಯವಿದೆ. ಭದ್ರತೆಯ ಕೊರತೆ ಕಾರಣದಿಂದ ತಕ್ಷಣವೇ ಮತ ಎಣಿಕೆ ಆರಂಭಿಸಿ, ಫಲಿತಾಂಶ ಪ್ರಕಟಿಸಲು ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ ಮಂಗಳವಾರ ಅರ್ಜಿಯ ವಿಚಾರಣೆ ಆರಂಭಿಸಿತು. ಅರ್ಜಿದಾರರ ಕೋರಿಕೆ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಗಳಿಗೆ ಸೂಚಿಸಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು