ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ: ಡಿ.ಕೆ.ಶಿವಕುಮಾರ್‌

ಪರಿಷತ್‌ ಚುನಾವಣೆ, ಪಕ್ಷ ಸಂಘಟನೆಗೆ ‘ಕೈ’ ನಾಯಕರ ಪೂರ್ವಭಾವಿ ಸಭೆ
Last Updated 4 ಸೆಪ್ಟೆಂಬರ್ 2021, 21:45 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನ ಪರಿಷತ್ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನ ಕಾಲಾವಕಾಶ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಚುನಾವಣೆಗೆ ಪೂರ್ವತಯಾರಿ ಮತ್ತು ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾ ಘಟಕಗಳ ನಾಯಕರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು’ ಎಂದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಗಾಂಧೀಜಿ ಗ್ರಾಮ ಸ್ವರಾಜ್ಯ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಪಕ್ಷದ ಎಲ್ಲ ನಾಯಕರು ಅಕ್ಟೋಬರ್ ತಿಂಗಳಲ್ಲಿ ದಿನಕ್ಕೆ ಎರಡು ಗ್ರಾಮ ಪಂಚಾಯಿತಿಯಲ್ಲಿ ಪಕ್ಷದ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT