ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೇ 100 ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮ’

Last Updated 5 ಫೆಬ್ರುವರಿ 2021, 18:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2019–2020ರಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲ 14,183 ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲೂ ಮುಂದುವರಿಸಲು ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ವಿಷಯ ಪ್ರಸ್ತಾಪಿಸಿ, ‘ಶೇ 50ರಷ್ಟು (7091) ಅತಿಥಿ ಉಪನ್ಯಾಸಕರನ್ನು ಮಾತ್ರ ಮುಂದುವರಿಸುವಂತೆ ಜ. 19ರಂದು ಆದೇಶ ಹೊರಡಿಸಲಾಗಿದೆ. ಇದರಿಂದ ಬೋಧನೆಯಲ್ಲೇ ಅವಲಂಬಿಸಿರುವ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗಿದೆ’ ಎಂದರು. ಅದಕ್ಕೆ ಬಿಜೆಪಿಯ ಆಯನೂರು ಮಂಜುನಾಥ್‌ ಮತ್ತು ಜೆಡಿಎಸ್‌ನ ಶ್ರೀಕಂಠೇಗೌಡ ಕೂಡಾಧ್ವನಿಗೂಡಿಸಿದರು.

‘ಸರ್ಕಾರ ಈ ಉಪನ್ಯಾಸಕರಿಗೆ ಈಗಾಗಲೇ ಐದು ತಿಂಗಳು ಗೌರವಧನ ಬಿಡುಗಡೆ ಮಾಡಿದೆ. ಆರ್ಥಿಕ ಇಲಾಖೆಯ ಸೂಚನೆಯಂತೆ ಶೇ 50ರಷ್ಟು ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ನೀಡಲಾಗಿದೆ. ಎಲ್ಲ ಉಪನ್ಯಾಸಕರನ್ನೂ ಸೇವೆಗೆ ಪರಿಗಣಿಸಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT