ಭಾನುವಾರ, ಸೆಪ್ಟೆಂಬರ್ 25, 2022
30 °C
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ನ.23ರಂದು ‘ಸುಪ್ರೀಂ’ನಲ್ಲಿ ವಿಚಾರಣೆ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದಲ್ಲಿ ಸಮರ್ಥ ಕಾನೂನು ತಜ್ಞರ ತಂಡ ನೇಮಕ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಸುಪ್ರೀಂಕೋರ್ಟ್‌ನಲ್ಲಿ ನ.23ರಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ವಿಷಯ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿ ವಿವಾದದ ಕುರಿತು ಈಗಾಗಲೇ ಅಡ್ವೊಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡಿಸಲು ನುರಿತ ಹಿರಿಯ ವಕೀಲರನ್ನು ನಿಯೋಜಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಸರ್ಕಾರ ಈ ಕುರಿತು ನಿರ್ಲಕ್ಷ್ಯ ವಹಿಸಿಲ್ಲ. ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು