ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಅಕ್ರಮ 38 ಶಿಕ್ಷಕರ ಬಂಧನ

ಪಾಠ ಮಾಡುತ್ತಿದ್ದಾಗಲೇ ಬಂಧನ
Last Updated 19 ಅಕ್ಟೋಬರ್ 2022, 21:55 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ 2012–13 ಹಾಗೂ 2014–15ನೇ ಸಾಲಿನಲ್ಲಿ ನಡೆಸಿದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದ ಬೆನ್ನುಹತ್ತಿರುವ ಸಿಐಡಿ ಅಧಿಕಾರಿಗಳು, ಬುಧವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ 38 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ 24, ಬೆಂಗಳೂರು ದಕ್ಷಿಣ ವಿಭಾಗದ 5, ಚಿಕ್ಕಬಳ್ಳಾಪುರ ಜಿಲ್ಲೆಯ 3 ಹಾಗೂ ಚಿತ್ರದುರ್ಗ ಜಿಲ್ಲೆಯ 5 ಸಹ ಶಿಕ್ಷಕರು ಸೇರಿದಂತೆ ಒಟ್ಟು 38 ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಬಹುತೇಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ವಿಧಾನಸೌಧ ಠಾಣೆಯಲ್ಲಿ ಕಳೆದ ಆಗಸ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಸಿಐಡಿ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT