ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಶೀಘ್ರ ತೀರ್ಮಾನ; ಬೊಮ್ಮಾಯಿ

Last Updated 8 ನವೆಂಬರ್ 2022, 13:21 IST
ಅಕ್ಷರ ಗಾತ್ರ

ಹೊಸದುರ್ಗ (ಚಿತ್ರದುರ್ಗ): ಮುರುಘಾ ಮಠದ ಆಡಳಿತ ವೈಖರಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಜಿಲ್ಲಾಧಿಕಾರಿಗೆ ವರದಿ ಕೇಳಿದೆ. ಜಿಲ್ಲಾಧಿಕಾರಿ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸರ್ಕಾರಕ್ಕೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಮಠದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸಾಕಷ್ಟು ವರದಿಗಳು ಪ್ರಸಾರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ಹೀಗಾಗಿ, ವಸ್ತುನಿಷ್ಠ ವರದಿ ನೀಡುವಂತೆ ಜಿಲ್ಲಾಧಿಕಾರಿಯನ್ನು ಕೇಳಲಾಗಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ಆಡಳಿತಾಧಿಕಾರಿ ನೇಮಕದ ಪೂರ್ವದಲ್ಲಿ ಮಠದಲ್ಲಿ ಏನು ನಡೆದಿದೆ ಎಂಬ ಬಗ್ಗೆ ಅಧಿಕೃತವಾಗಿ ಸರ್ಕಾರಕ್ಕೆ ಮನವರಿಕೆ ಆಗಬೇಕಿದೆ. ಮುರುಘಾ ಮಠದ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳುವ ಮೊದಲು ನ್ಯಾಯಸಮ್ಮತ ಪ್ರಕ್ರಿಯೆಗೆ ಮುಂದಾಗಿದೆ. ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಿ’ ಎಂದರು.

‘ಶಿವಮೂರ್ತಿ ಮುರುಘಾ ಶರಣರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಆರೋಪದ ಕುರಿತು ವ್ಯಾಖ್ಯಾನ ಮಾಡುವುದು ತಪ್ಪಾಗುತ್ತದೆ. ಎಲ್ಲವನ್ನೂ ನ್ಯಾಯಾಲಯ ನಿರ್ಧರಿಸುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT