ಸೋಮವಾರ, ಮಾರ್ಚ್ 20, 2023
24 °C

ಕಾಡುಗೊಲ್ಲರ ನಿಗಮದ ಅಧ್ಯಕ್ಷರ ನೇಮಕ: ಮರು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಂಗಾವರ ಮಾರಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮರು ಆದೇಶ ಹೊರಡಿಸಿದೆ.

ಈ ಹಿಂದೆ ನಿಗಮದ ಅಧ್ಯಕ್ಷರಾಗಿ ಮಾರಣ್ಣ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು. ಕೆಲವರು ಅವರ ನೇಮಕ ವಿರೋಧಿಸಿದ ಕಾರಣ ಅಧಿ ಕಾರ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

‘ಶಿರಾ ವಿಧಾನಸಭಾ ಉಪ ಚುನಾವಣೆ ಸಮಯದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಕೊಟ್ಟ ಭರವಸೆಯಂತೆ ನಿಗಮ ಸ್ಥಾಪಿಸಲಾಗಿತ್ತು. ಪಕ್ಷ ಹಾಗೂ ಸಮುದಾಯಕ್ಕೆ ಮಾರಣ್ಣ ಸಲ್ಲಿಸಿರುವ ಸೇವೆ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು’ ಎಂದು ಶಿರಾ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು