ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಕೋವಿಡ್ ಕಾರಣಕ್ಕಾಗಿ ಅರ್ಜಿ ಸಲ್ಲಿಸಲು ತೊಂದರೆ ಆಗಿದೆ ಎಂದು ಕಲ್ಯಾಣ ಕರ್ನಾಟಕ ಭಾಗದ ಅನೇಕ ಉದ್ಯೋಗಾಕಾಂಕ್ಷಿಗಳು ಕರೆ ಮಾಡಿ ಅಸಾಹಾಯಕತೆ ವ್ಯಕ್ತಪಡಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅರ್ಜಿ ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.

ಪಶುವೈದ್ಯಕೀಯ ಸಹಾಯಕ 83 ಹುದ್ದೆಗಳು ಮತ್ತು ಪಶುವೈದ್ಯಕೀಯ ಪರೀಕ್ಷಕ 32 ಹುದ್ದೆ ಸೇರಿಒಟ್ಟು 115 ಹುದ್ದೆಗಳಿಗೆ ಇದೇ ಆಗಸ್ಟ್ 18ರ ವರೆಗೆ ಅರ್ಜಿ ಸಲ್ಲಿಸಬಹುದು.

ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದ ಪಶು ವೈದ್ಯಕೀಯ ಸೇವೆಯನ್ನು ಹೆಚ್ಚು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.