ತುಮಕೂರು - ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಕೇಂದ್ರ ಅನುಮೋದನೆ: ಬಿಎಸ್ವೈ ಹರ್ಷ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು - ಶಿವಮೊಗ್ಗ ನಡುವೆ ಭಾರತ್ ಮಾಲಾ ಯೋಜನೆ ಅಡಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ₹6397.47 ಕೋಟಿ ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಯೋಜನೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.