ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀ ಹೇಳಿಕೆಗೆ ಆರೂಢಭಾರತೀ ಶ್ರೀ ಖಂಡನೆ

Last Updated 19 ಮಾರ್ಚ್ 2021, 20:01 IST
ಅಕ್ಷರ ಗಾತ್ರ

ಬೆಂಗಳೂರು: ಬ್ರಾಹ್ಮಣ ಹೆಣ್ಣು ಮಕ್ಕಳ ಅಂತರ್ಜಾತಿ ವಿವಾಹದ ಕುರಿತು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ನೀಡಿದ್ದ ಹೇಳಿಕೆಯನ್ನು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್‌ ಆಶ್ರಮದ ಅಧ್ಯಕ್ಷ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ.

‘ಹಿಂದೂ ಧರ್ಮದಲ್ಲಿ ಚಾತುರ್ವರ್ಣ ವ್ಯವಸ್ಥೆಯನ್ನು ಜೀವಂತವಾಗಿಡುವ ಹುನ್ನಾರ ಇದಾಗಿದೆ. ಜಾತಿ ನಿರ್ಮೂಲನೆಯಿಂದ ಮಾತ್ರ ಹಿಂದೂ ಸಮಾಜವನ್ನು ಒಗ್ಗೂಡಿಸಲು ಸಾಧ್ಯ. ಈ ಉದ್ದೇಶದಿಂದಲೇ ಗೋಕಾಕ್‌ನ ಮಣ್ಣೀಕೆರಿಯಲ್ಲಿ ಅಂತರ್ಜಾತಿ
ವಿವಾಹ ಪ್ರೋತ್ಸಾಹಕ ಸಂಘ ಸ್ಥಾಪಿಸಲಾಗಿದೆ’ ಎಂದು ಆರೂಢಭಾರತೀ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬ್ರಾಹ್ಮಣ ಹೆಣ್ಣು ಮಕ್ಕಳು ಇತರೆ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಳಿ ರಚಿಸಬೇಕು’ ಎಂದು ವಿಶ್ವಪ್ರಸನ್ನತೀರ್ಥರು ಇತ್ತೀಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT