ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವರಂಗಿ ಆಟಗಳನ್ನು ಬಿಟ್ಟು ಕೂಡಲೇ ಆರೋಪಿಯನ್ನು ಬಂಧಿಸಿ: ಕಾಂಗ್ರೆಸ್ ಒತ್ತಾಯ

Last Updated 27 ಮಾರ್ಚ್ 2021, 14:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಿ.ಡಿ. ಪ್ರಕರಣ ಬಾರಿ ಸದ್ದು ಮಾಡುತ್ತಿದ್ದು, ಸಂತ್ರಸ್ತೆಗೆ ರಕ್ಷಣೆ ನೀಡುವ ಬದಲಿಗೆ ಆರೋಪಿಗೆ ನೂರಾರು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ನೀಡುತ್ತಿರುವ ಸರ್ಕಾರ. ಪೊಲೀಸರನ್ನು ಕಳಿಸಬೇಕಿದ್ದಿದ್ದು ಅರೆಸ್ಟ್ ಮಾಡುವುದಕ್ಕೋ ಅಥವಾ ರಕ್ಷಣೆ ಮಾಡುವುದಕ್ಕೋ ಬಸವರಾಜ ಬೊಮ್ಮಾಯಿ ಅವರೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತು ಟ್ವೀಟ್ ಮಾಡಿ, ಇದೇನು 'ಯುಪಿ ಮಾಡೆಲ್' ಅಲ್ಲವೇ? ಈ ನವರಂಗಿ ಆಟಗಳನ್ನು ಬಿಟ್ಟು ಕೂಡಲೇ ಆರೋಪಿಯನ್ನು ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ರಮೇಶ್ ಜಾರಕಿಹೊಳಿಯ ದೃಶ್ಯವಷ್ಟೇ ಅಶ್ಲೀಲವಲ್ಲ, ಮಾತೂ ಅಶ್ಲೀಲ. ಬಿಜೆಪಿ ಸಂಸ್ಕೃತಿ ಬಿಂಬಿಸುವ 'ದೊಡ್ಡ ದೊಡ್ಡ' ಮಾತುಗಳನ್ನಾಡಿದ್ದಾರೆ, ಇದು ಹೊಲಸುತನದ ಪರಮಾವಧಿ. ಅಂತಹ ಪದಗಳು ಬಿಜೆಪಿಗರ ಬಾಯಲ್ಲಿ ಮಾತ್ರ ಬರಲು ಸಾಧ್ಯ. ಬೊಮ್ಮಾಯಿ ಅವರೇ, ಕೇಸ್ ದಾಖಲಾಗಿದ್ದರೂ ಬಂಧಿಸದೇ ಇಂತ ಕೀಳು ನಾಟಕ ಆಡಲು ಬಿಟ್ಟಿದ್ದೀರಾ? ಎಂದು ಹೇಳಿದ್ದಾರೆ.

ಯಾರೋ ಹೆಸರು ಹೇಳಿದ್ದಕ್ಕೆ ರಾಜೀನಾಮೆ ಕೇಳುವ ಬಿಜೆಪಿಯವರು, ಚಾಂದಿನಿ ನಾಯ್ಕರಿಗೆ ಹಲ್ಲೆ ನಡೆಸಿದ ಶಾಸಕ ಸಿದ್ದು ಸವದಿಯನ್ನು ಉಚ್ಛಾಟಿಸಿ. ತಡೆಯಾಜ್ಞೆ ತಂದಿರುವ 6 ಸಚಿವರ ರಾಜೀನಾಮೆ ಪಡೆಯಿರಿ. ಸದನದ ಸದಸ್ಯರ ಚಾರಿತ್ರ್ಯ ಪ್ರಶ್ನಿಸಿದ ಸುಧಾಕರ್ ರಾಜೀನಾಮೆ ಪಡೆಯಿರಿ. ಅತ್ಯಾಚಾರಿ ಮಾಜಿ ಸಚಿವನ ಪಕ್ಷದಿಂದ ಉಚ್ಛಾಟಿಸಿ ನೈತಿಕತೆ ತೋರಿ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT