ಬೆಂಗಳೂರು: ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿ ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೊ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿದೆ.

ಟೆಂಪೊ ಟ್ರಾವೆಲರ್‌ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ.

ಹಾಲಿನ ಟ್ಯಾಂಕರ್ ಚಾಲಕ ಡೈವರ್ಷನ್ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮೃತರು ಧರ್ಮಸ್ಥಳದಿಂದ ಹಿಂದಿರುಗಿ ಹಾಸನದ ಹಾಸನಾಂಬೆ ದರ್ಶನ ಮಾಡಿಕೊಂಡು ವಾಪಸ್ ತಮ್ಮ ಊರಿಗೆ ತೆರಳುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.