ಕೆ. ಸೋಮಶೇಖರ್ ಅವರು ಸಿದ್ಧಪಡಿಸಿರುವ ನಾಡದೇವಿ ಚಿತ್ರ ಅಧಿಕೃತ

ಬೆಂಗಳೂರು: ಚಿತ್ರ ಕಲಾವಿದ ಕೆ. ಸೋಮಶೇಖರ್ ಅವರು ಸಿದ್ಧಪಡಿಸಿರುವ ‘ನಾಡದೇವಿ’ಯ ಚಿತ್ರವನ್ನು ಅಧಿಕೃತವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ನಾಡದೇವಿ ಚಿತ್ರವನ್ನು ಆಯ್ಕೆ ಮಾಡುವ ಸಂಬಂಧ ಈ ಹಿಂದೆ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಡಿ. ಮಹೇಂದ್ರ ಅಧ್ಯಕ್ಷತೆಯಯಲ್ಲಿ ಸಮಿತಿ ರಚಿಸಲಾಗಿತ್ತು. ರಾಜ್ಯದ ಸಾಂಪ್ರದಾಯಿಕ ಕಲೆ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ, ಸೋಮಶೇಖರ್ ಅವರು ರಚಿಸಿದ ‘ನಾಡದೇವಿ’ಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.
ಅಧಿಕೃತಗೊಳಿಸಿರುವ ನಾಡದೇವಿ ಚಿತ್ರದ ಹಿಂದೆ ಕರ್ನಾಟಕದ ನಕ್ಷೆ ಹಾಗೂ ಬಾವುಟ ಇದೆ. ಕಾಲಿಗೆ ಆಸರೆಯಾಗಿ ಕೆಳಗೆ ತಾವರೆ (ಕಮಲ) ಹೂವು ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.