ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ: ಅರುಣ್‌ಸಿಂಗ್‌ ವಿಶ್ವಾಸ

Last Updated 30 ಆಗಸ್ಟ್ 2021, 22:11 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ವಿಧಾನಸಭಾ (2023) ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಲ್ಕು ದಿನಗಳ ರಾಜ್ಯ ಭೇಟಿಗಾಗಿ ಬೆಂಗಳೂರಿಗೆ ಬಂದ ಅವರು ಕೆಂಪೇ ಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದ್ದು, 2023 ರಲ್ಲೂ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಬಾರಿ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ಅವರು ತಿಳಿಸಿದರು.

ಸಂಜೆಯೇ ಮೈಸೂರಿಗೆ ಪ್ರಯಾಣ ಬೆಳೆಸಿದ ಅವರು, ಮಂಗಳವಾರ( ಆ.31 ರಂದು) ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರು ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ, ಜಿಲ್ಲಾ ಕೋರ್‌ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಧಾನ ಕಾರ್ಯ ದರ್ಶಿ ಸಿದ್ದರಾಜು ವಿಮಾನನಿಲ್ದಾಣದಲ್ಲಿ ಸಿಂಗ್ ಅವರನ್ನು ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT