ಮಂಗಳವಾರ, ಜುಲೈ 27, 2021
28 °C
ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ

‘ಮದ್ಯ ಅತ್ಯಾವಶ್ಯಕ ವಸ್ತುವೇ’ ಶಾಸಕ ಬೆಲ್ಲದ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಮದ್ಯ ಅತ್ಯಾವಶ್ಯಕ ವಸ್ತುವೇ, ಮದ್ಯ ಯಾವಾಗಿನಿಂದ ಅವಶ್ಯಕವಾಯಿತು’ ಎಂದು ಶಾಸಕ ಅರವಿಂದ ಬೆಲ್ಲದ ಪ್ರಶ್ನಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ಫ್ಯೂ ವೇಳೆಯಲ್ಲಿ ಮದ್ಯದ ಅಂಗಡಿಗಳಿಗೆ ಅವಕಾಶ ನೀಡಿದ ಸರ್ಕಾರ ಅಗತ್ಯ ವಸ್ತುಗಳ ಅಂಗಡಿ ತೆರೆಯಲಿ. ಮದ್ಯದ ಅಂಗಡಿ ತೆರೆಯೋದು ಎಷ್ಟು ಸರಿ? ಆಡಳಿತದ ಈ ನಿರ್ಧಾರಕ್ಕೆ ನನ್ನ ವಿರೋಧವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಕ್ರಮ ಕೈಗೊಳ್ಳಲು ನಾನು ಒತ್ತಾಯಿಸುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.