ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅರವಿಂದ ಲಿಂಬಾವಳಿ

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.