ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ: ಗೌರವಧನ ₹ 12 ಸಾವಿರ ನಿಗದಿಗೆ ಆಗ್ರಹ

Last Updated 11 ಫೆಬ್ರುವರಿ 2022, 16:28 IST
ಅಕ್ಷರ ಗಾತ್ರ

ಬೆಂಗಳೂರು:ಕೇಂದ್ರ ಮತ್ತು ರಾಜ್ಯದ ಪ್ರೋತ್ಸಾಹಧನ ಹಾಗೂ ಗೌರವಧನ ಸೇರಿಸಿ ಕನಿಷ್ಠ ₹ 12 ಸಾವಿರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಈ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ‘ಆಶಾ ಕಾರ್ಯಕರ್ತೆಯರಿಗೆ ಅವರ ಕಾರ್ಯ ಕ್ಷೇತ್ರದ ಜನಸಂಖ್ಯೆಗೆ ಅನುಗುಣವಾಗಿ ವೇತನ ನಿಗದಿ ಮಾಡಬೇಕು. ಕೋವಿಡ್ ಅವಧಿಯಲ್ಲಿ ವಿಶೇಷ ಕೆಲಸಗಳಿಗೆ ವಿಶೇಷ ಮಾಸಿಕ ಭತ್ಯೆ ₹ 5 ಸಾವಿರವನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು’ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.

‘ಸೇವೆಯಲ್ಲಿರುವ ಆಶಾ ಕಾರ್ಯಕರ್ತೆ ತೀವ್ರ ಕಾಯಿಲೆಗೆ ಹಾಗೂ ಅಪಘಾತಕ್ಕೆ ಒಳಗಾದಲ್ಲಿ ಅವರಿಗೆ ಮತ್ತು ಕುಟುಂಬದ ಸದಸ್ಯರಿಗೆ ಉಚಿತ ಚಿಕಿತ್ಸೆ, ಪರಿಹಾರ ನೀಡಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT