ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ವದಂತಿ ಅಷ್ಟೇ: ಡಿಸಿಎಂ ಅಶ್ವತ್ಥನಾರಾಯಣ

Last Updated 19 ಜುಲೈ 2021, 6:31 IST
ಅಕ್ಷರ ಗಾತ್ರ

ರಾಮನಗರ: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಮುಖ್ಯಮಂತ್ರಿ‌ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಇದೇ 25 ಅಥವಾ 26ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ‌ ಕುರಿತು ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು. 'ಇದೆಲ್ಲ ಬರೀ ವದಂತಿ. ಆ ರೀತಿಯ ಯಾವುದೇ ಪ್ರಸ್ತಾವ ಪಕ್ಷದ ನಾಯಕರ ಮುಂದೆ ಇಲ್ಲ. ಮುಂದಿನ ಎರಡು ವರ್ಷವೂ ಯಡಿಯೂರಪ್ಪ ಅವರೇ ಸಿ.ಎಂ. ಆಗಿ ಮುಂದುವರಿಯಲಿದ್ದಾರೆ' ಎಂದರು.

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೊ‌ ನಕಲಿ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದು ಡಿಸಿಎಂ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT