ಮಂಡ್ಯ: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು ಮುಂದಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆದ ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಾಪ್ರಭು ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದಾರೆ.
ಮೇ 15ರಂದು ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಅವರು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಮಹಿಳಾ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ, ಪಿ.ಇ.ಎಸ್ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಮತಯಾಚನೆ ಮಾಡಿದ್ದರು. ಸಚಿವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು.
ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಚುನಾವಣಾ ಪ್ರಚಾರ ಮಾಡಿ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಮೇಲ್ನೋಟಕ್ಕೆ ಸಾಬೀತಾಗಿದೆ, ಸಚಿವರ ವಿರುದ್ಧ ಮುಂದಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಶಿಫಾರಸು ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.